ದೇಶ

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್
ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮ
Published On :
ನವದೆಹಲಿ: ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್, ಪಕ್ಷದ ನಿಷ್ಠಾವಂತ ನಾಯಕ ಎಂದು ಹೆಸರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ  ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ. 
ಮಾಜಿ ಪ್ರಧಾನಮಂತ್ರಿ ಡಾ. ಮನ್ ಮೋಹನ್ ಸಿಂಗ್ ಕೂಡಾ ಕಾರ್ಯಕ್ರಮದಲ್ಲಿ ಕಾಣಲಿಲ್ಲ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿತ್ತು. ಆದಾಗ್ಯೂ ಅವರು ಏಕೆ ಕಾರ್ಯಕ್ರಮದಿಂದ ದೂರ ಉಳಿದರು ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ.
ಕಾಂಗ್ರೆಸ್ ಪಕ್ಷದ ಇತರ ನಾಯಕರಾದ ಆನಂದ್ ಶರ್ಮಾ, ಅಹ್ಮದ್ ಪಟೇಲ್, ಭೂಪೇಂದ್ರ ಸಿಂಗ್ ಹೂಡಾ, ಜನಾರ್ದನ್ ದ್ವಿವೇದಿ, ಆರ್ ಪಿಎನ್ ಸಿಂಗ್, ಮತ್ತಿತರರು ಪಾಲ್ಗೊಂಡಿದ್ದರು. 
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ನಂತರ ರಾಹುಲ್ ಗಾಂಧಿ ಅಷ್ಟಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲೂ ಆಗಾಗ್ಗೇ ಕಾಣಿಸಿಕೊಳ್ಳುತ್ತಾರೆ. 
ಪ್ರಣಬ್ ಮುಖರ್ಜಿ ಹಾಗೂ ಆರ್ ಎಸ್ ಎಎಸ್ ಮುಖಂಡ ನಾನಾಜಿ ದೇಶ್ ಮುಖ್ , ಅಸ್ಸಾಂ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.