ದೇಶ

ಸಂವಿಧಾನದ ಚೌಕಟ್ಟಿನೊಳಗೆ 370ನೇ ವಿಧಿ ರದ್ದು: ಭಾರತ ಬೆಂಬಲಿಸಿದ ರಷ್ಯಾ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದೆ.

ಸಂವಿಧಾನದ ಚೌಕಟ್ಟಿನೊಳಗೆ 370ನೇ ವಿಧಿ ರದ್ದು: ಭಾರತ ಬೆಂಬಲಿಸಿದ ರಷ್ಯಾ
Published On :

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದೆ.

ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದಂತೆ  ಭಾರತ ಕೈಗೊಂಡ ನಿರ್ಧಾರದಿಂದ ಆ ಭಾಗದಲ್ಲಿ ಭಾರತ ಹಾಗೂ ಪಾಕಿಸ್ತಾನ ಆಕ್ರಮಣಕಾರಿ ನೀತಿ ಅನುಸರಿಸುವುದಿಲ್ಲ ಎಂಬ ನಿರೀಕ್ಷೆಯನ್ನು ಮಾಸ್ಕೊ ಹೊಂದಿರುವುದಾಗಿ ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯಿಸಿದೆ.

ಭಾರತ ಸಂವಿಧಾನದ ಚೌಕಟಿನೊಳಗೆ ಜಮ್ಮು- ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಲಾಗಿದೆ. ಇದರಿಂದಾಗಿ ಉಭಯ ದೇಶಗಳ ನಡುವಣ ಯಾವುದೇ ರೀತಿಯ ಯುದ್ಧದಂತ ಮನೋಭಾವ ಉಂಟಾಗುವುದಿಲ್ಲ ಎಂದು ಭರವಸೆ ಹೊಂದಿರುವುದಾಗಿ ತಿಳಿಸಿದೆ. 

ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧವನ್ನು ಸುಧಾರಿಸುವ ನಿಟ್ಟಿನಲ್ಲಿ ರಷ್ಯಾ ನಿರಂತರವಾಗಿ ಬೆಂಬಲಿಸುತ್ತಾ ಬಂದಿದೆ. 1972ರ ಶಿಮ್ಲಾ ಒಪ್ಪಂದ ಹಾಗೂ 1999ರ ಲಾಹೋರ್ ಘೋಷಣೆಯಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.