ಕೇರಳ ಪ್ರವಾಹ: ವಯನಾಡ್ ಪುನರ್ವಸತಿ ಕೇಂದ್ರದಲ್ಲಿ ವಿಷ ಆಹಾರ ಸೇವನೆ: 30 ಮಂದಿ ಸಂತ್ರಸ್ಥರು ಅಸ್ವಸ್ಥ
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ನಿರಾಶ್ರಿತ ಶಿಬಿರದಲ್ಲಿ ವಿಷಾಹಾರ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಂತ್ರಸ್ಥರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡ್: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ನಿರಾಶ್ರಿತ ಶಿಬಿರದಲ್ಲಿ ವಿಷಾಹಾರ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಂತ್ರಸ್ಥರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಪ್ರವಾಹ ಪೀಡಿತ ಕೇರಳದ ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ ಜನರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಲಯಾಳಂ ಮನೋರಮಾ ಪತ್ರಿಕೆ ವರದಿ ಮಾಡಿದೆ.
ಇನ್ನು ಪುನವರ್ಸತಿ ಕೇಂದ್ರದಲ್ಲಿನ ವಿಷಯುಕ್ತ ಆಹಾರಕ್ಕೆ ಕಾರಣ ತಿಳಿದುಬಂದಿಲ್ಲ. ಈ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಿರಾಶ್ರಿತ ಶಿಬಿರದಲ್ಲಿನ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ. ಭೂಕುಸಿತ ಮತ್ತು ಮಹಾಮಳೆಗೆ ಇಲ್ಲಿಯವರೆಗೆ 76 ಮಂದಿ ಪ್ರಾಣ ಕಳೆದುಕೊಂಡಿದ್ದು ನಾಪತ್ತೆಯಾದವರ ಸಂಖ್ಯೆ 58 ಆಗಿದೆ ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ವಿಡಿಯೊ ಸಂವಾದ ನಡೆಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿತುಕೊಳ್ಳುತ್ತಿದ್ದರು ಪಿಣರಾಯಿ. ಕೇರಳದಲ್ಲಿ 1654 ಪುನರ್ವಸತಿ ಕೇಂದ್ರಗಳಿದ್ದು 2,87,585 ಮಂದಿ ಆಶ್ರಯ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


