ಕರಾವಳಿ ರಕ್ಷಣಾಪಡೆಯ ಸಹಾಯಕ ನೌಕೆಯಲ್ಲಿ ಬೆಂಕಿ ಅವಘಡ: ಓರ್ವ ಸಿಬ್ಬಂದಿ ಸಾವು, 28 ಮಂದಿಯ ರಕ್ಷಣೆ
ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯ ಬಂದರು ತೀರದಲ್ಲಿದ್ದ ಭಾರತೀಯ ನೌಕಾಪಡೆಯ ಸಹಾಯಕ ನೌಕೆಯಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದ್ದು, ನೌಕೆಯಲ್ಲಿದ್ದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯ ಬಂದರು ತೀರದಲ್ಲಿದ್ದ ಭಾರತೀಯ ನೌಕಾಪಡೆಯ ಸಹಾಯಕ ನೌಕೆಯಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದ್ದು, ನೌಕೆಯಲ್ಲಿದ್ದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಈ ನೌಕೆಯಲ್ಲಿ 29 ಸಿಬ್ಬಂದಿಗಳು ಇದ್ದರು ಎಂದು ಕರಾವಳಿ ರಕ್ಷಣಾಪಡೆಯ ಮೂಲಗಳು ತಿಳಿಸಿವೆ. ಇದರಲ್ಲಿ ಓರ್ವ ಸಾವಿಗೀಡಾಗಿದ್ದು, 28 ಮಂದಿ ಪಾರಾಗಿದ್ದಾರೆ. ಅಂತೆಯೇ 15 ಮಂದಿಗೆ ಗಾಯಗಳಾಗಿದ್ದು, 8 ಮಂದಿಗೆ ಸಾಮಾನ್ಯ ಗಾಯಗಳಾಗಿವೆ. ಗಂಭೀರ ಗಾಯಗೊಂಡಿರುವ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ 11.30ಕ್ಕೆ ಸಹಾಯಕ ನೌಕೆ ಕೋಸ್ಟಲ್ ಜಾಗ್ವಾರ್ ನಲ್ಲಿ ಸ್ಫೋಟದ ಸದ್ದು ಕೇಳಿದೆ. ಇದಾದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಕಪ್ಪು ಹೊಗೆ ಇಡೀ ನೌಕೆಯನ್ನು ಆವರಿಸಿದ್ದು, ತಕ್ಷಣವೇ ಅದರಲ್ಲಿದ್ದ ಸಿಬ್ಬಂದಿಗಳು ನೀರಿಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡ ಸಂಭವಿಸಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.
About 15 crew injured in a major fire explosion in an Offshore Supporting Vessel #CoastalJaguar on Vizag coast. One missing. pic.twitter.com/ZcyDIj9N00
— MS Rao
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


