ಅಳ್ವಾರ್ ಗುಂಪು ಹಲ್ಲೆ: ಪೆಹ್ಲು ಖಾನ್ ಹತ್ಯೆ ಪ್ರಕರಣದ ಎಲ್ಲಾ 6 ಆರೋಪಿಗಳು ಖುಲಾಸೆ
ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಪ್ರಕರಣದ ಎಲ್ಲಾ ಆರು ಆರೋಪಿಗಳನ್ನು ಅಳ್ವಾರ್ ಕೋರ್ಟ್ ಬುಧವಾರ ಖುಲಾಸೆಗೊಳಿಸಿ ತೀರ್ಪು....

ಅಳ್ವಾರ್(ರಾಜಸ್ಥಾನ): ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಪ್ರಕರಣದ ಎಲ್ಲಾ ಆರು ಆರೋಪಿಗಳನ್ನು ಅಳ್ವಾರ್ ಕೋರ್ಟ್ ಬುಧವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಏಪ್ರಿಲ್ 1, 2017ರಲ್ಲಿ ಹೈನುಗಾರಿಕೆ ನಡೆಸುತ್ತಿದ್ದ ಪೆಹ್ಲು ಖಾನ್ ಅಗತ್ಯ ಪರವಾನಿಗೆ ಪಡೆದು ಗೋವುಗಳನ್ನು ಮಾರುಕಟ್ಟೆಯಿಂದ ಮನೆಗೆ ಸಾಗಿಸುತ್ತಿದ್ದ ವೇಳೆ ಅಲ್ವಾರ್‌ನಲ್ಲಿ ದಾಳಿ ನಡೆದಿತ್ತು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೆಹ್ಲು ಖಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸಾಯುವ ಮುನ್ನ ಎಲ್ಲಾ 6 ಆರೋಪಿಗಳ ಹೆಸರನ್ನೂ ಪೆಹ್ಲು ಖಾನ್ ಹೇಳಿದ್ದರು.
ಈ ಸಂಬಂಧ ರಾಜಸ್ಥಾನ ಪೊಲೀಸರು ಎರಡು ಎಫ್ಐಆರ್ ಗಳನ್ನು ದಾಖಲಿಸಿದ್ದರು. ಒಂದು ದಾಳಿ ನಡೆಸಿದವರ ಮೇಲೆ ಮತ್ತೊಂದು ಗೋಕಳ್ಳಸಾಗಾಣೆಕೆ ಮಾಡಿದ ಆರೋಪದ ಮೇಲೆ ಪೆಹ್ಲು ಖಾನ್ ಹಾಗೂ ಆತನ ಕುಟುಂಬದ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


