ಪ್ರಚೋದನೆಗೆ ತಕ್ಕಶಾಸ್ತ್ರಿ: ಮೂವರು ಪಾಕ್ ಯೊಧರ ಹೊಡೆದುರುಳಿಸಿದ ಭಾರತೀಯ ಸೇನೆ
ಇಡೀ ದೇಶ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದರೆ. ಅತ್ತ ಗಡಿಯಲ್ಲಿ ಭಾರತದ ಸಂಭ್ರಮಕ್ಕೆ ಅಡ್ಡಿ ಪಡಿಸಲೆಂದೇ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಿ ಯೋಧರ ಉದ್ಧಟತನಕ್ಕೆ ಭಾರತೀಯ ಯೋಧರು ತಕ್ಕಶಾಸ್ತಿ ಮಾಡಿದ್ದು, ಮೂವರು ಪಾಕಿಸ್ತಾನಿ ಯೋಧರನ್ನು ಹೊಡೆದುರುಳಿಸಿದ್ದಾರೆ.

ನವದೆಹಲಿ: ಇಡೀ ದೇಶ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದರೆ. ಅತ್ತ ಗಡಿಯಲ್ಲಿ ಭಾರತದ ಸಂಭ್ರಮಕ್ಕೆ ಅಡ್ಡಿ ಪಡಿಸಲೆಂದೇ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕಿಸ್ತಾನಿ ಯೋಧರ ಉದ್ಧಟತನಕ್ಕೆ ಭಾರತೀಯ ಯೋಧರು ತಕ್ಕಶಾಸ್ತಿ ಮಾಡಿದ್ದು, ಮೂವರು ಪಾಕಿಸ್ತಾನಿ ಯೋಧರನ್ನು ಹೊಡೆದುರುಳಿಸಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಾರತ ಮತ್ತು ಪಾಕಿಸ್ತಾನದ ಗಡಿ ಉರಿ ಮತ್ತು ರಜೌರಿ ಸೆಕ್ಟರ್ ನಲ್ಲಿ ಇಂದು ಬೆಳಗಿನಿಂದಲೇ ಪಾಕಿಸ್ತಾನಿ ಯೋಧರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆಯ ಪೋಸ್ಟ್ ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು. ಇತ್ತ ಗಡಿಯಲ್ಲಿ ಸ್ವಾತಂತ್ರ್ಯ ಸಂಭ್ರಮಕ್ಕೆ ಅಣಿಯಾಗುತ್ತಿದ್ದ ಯೋಧರು ಕೂಡಲೇ ಕರ್ತವ್ಯಕ್ಕೆ ಹಾಜರಾಗಿ ಪಾಕಿಸ್ತಾನಿ ಯೋಧರ ಗುಂಡೇಟಿಗೆ ಪ್ರತಿದಾಳಿ ನಡೆಸಿದರು.
ಬೆಳಗಿನಿಂದಲೂ ನಡೆದ ಗುಂಡಿನ ಚಕಮಕಿಯಲ್ಲಿ ಈ ವರೆಗೂ ಮೂವರು ಪಾಕಿಸ್ತಾನಿ ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಐದು ಭಾರತೀಯ ಯೋಧರ ಕೊಂದೆ ಎಂದ ಪಾಕಿಗಳ ಬಣ್ಣ ಬಯಲು
ಇನ್ನು ಇದೇ ದಾಳಿಯಲ್ಲಿ ಐದು ಮಂದಿ ಭಾರತೀಯ ಯೋಥರನ್ನು ಕೊಲ್ಲಲಾಗಿದೆ ಎಂಬ ಪಾಕಿಸ್ತಾನದ ವಾದ ಸುಳ್ಳಾಗಿದ್ದು, ಗುಂಡಿನ ಚಕಮಕಿಯಲ್ಲಿ ಯಾವುದೇ ಭಾರತೀಯ ಯೋಧ ಸಾವನ್ನಪ್ಪಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಎಲ್ ಒಸಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿರುವುದು ನಿಜ. ಆದರೆ ಇದಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದ್ದು, ಭಾರತೀಯ ವಲಯದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


