ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಸರ್ದಾರ್ ವಲ್ಲಭಬಾಯ್ ಪಟೇಲ್ ಕನಸು ನನಸು- ಪ್ರಧಾನಿ
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೆಂಪುಕೋಟೆಯಲ್ಲಿಂದು 73ನೇ ಸ್ವಾತಂತ್ಸೋವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ 10 ವಾರಗಳು ಪೂರ್ಣಗೊಂಡಿಲ್ಲ. ಆದರೆ, ಈ ಕಿರು ಅವಧಿಯಲ್ಲಿಯೇ ಅನೇಕ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಂವಿಧಾನದ 370 ನೇ ವಿಧಿ, ತ್ರಿವಳಿ ತಲಾಖ್ ಪದ್ದತಿಗೆ ಅಂತ್ಯ ಹಾಡಲಾಗಿದೆ ಎಂದು ತಿಳಿಸಿದರು.
370ನೇ ವಿಧಿಯಿಂದಾಗಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಹೆಚ್ಚಾಗಿತ್ತು. ಮಹಿಳೆಯರು, ಮಕ್ಕಳು, ದೀನ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ನೈರ್ಮಲ್ಯೀಕರಣ ವ್ಯವಸ್ಥೆ ಎಂಬುದೇ ಇರಲಿಲ್ಲ ಇದನ್ನು ಹೇಗೆ ಒಪ್ಪಿಕೊಳ್ಳಲಿ ಎಂದು ಪ್ರಶ್ನಿಸಿದ ಮೋದಿ, 370ನೇ ವಿಧಿಯನ್ನು ಸಮರ್ಥಿಸಿಕೊಳ್ಳುವವರು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಂತಿಮವಾಗಿ ಬಹುಮತದೊಂದಿಗೆ ಈ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ದೇಶದಲ್ಲಿನ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹ ಕುರಿತು ಕಳವಳ ವ್ಯಕ್ತಪಡಿಸಿ, ರಕ್ಷಾ ಬಂಧನ್ ಹಬ್ಬದ ಶುಭಾಶಯ ಕೋರುತ್ತಾ ಭಾಷಣ ಆರಂಭಿಸಿದ ಮೋದಿ, ಪ್ರವಾಹ ಪೀಡಿತ ಜನರ ಸಂಕಷ್ಟದಲ್ಲಿ ಎಲ್ಲರೂ ಒಗ್ಗೂಡಬೇಕಾಗಿದೆ ಎಂದರು.
ಜನಸಂಖ್ಯಾ ಹೆಚ್ಚಳದಿಂದ ಮುಂದಿನ ಪೀಳಿಗೆಗೆ ತೊಂದರೆಯಾಗಲಿದೆ. ಸಣ್ಣ ಕುಟುಂಬದ ನೀತಿ ಅನುಕರಣೆಯಿಂದ ದೇಶದ ಅಭಿವೃದ್ಧಿ ಹಾಗೂ ದೇಶಭಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ, ಕಪ್ಪು ಹಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಮೋದಿ ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


