ರೈಲ್ವೆ ಸಚಿವರನ್ನು ಭೇಟಿಯಾದ ಯಡಿಯೂರಪ್ಪ: ವಿವಿಧ ಯೋಜನೆ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ವಿವಿಧ ಯೋಜನೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ನಗರದ ಸಂಚಾರಿ ದಟ್ಟಣೆ ನಿವಾರಿಸುವ ಉದ್ದೇಶದಿಂದ ಬೆಂಗಳೂರು-ಉಪನಗರ ರೈಲ್ವೆ ಯೋಜನೆ ಜಾರಿಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುವಂತೆ ಕೋರಿದ್ದಾರೆ.
ಹಾಸನ- ಬೇಲೂರು- ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್ - ನಾಂದೇಡ್ ರೈಲು ಮಾರ್ಗಕ್ಕೆ ಅನುಮೋದನೆ, ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಪಿಯೂಷ್ ಗೋಯಲ್ ಅವರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.
ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಷಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


