ದೇಶ

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ
ಅರುಣ್ ಜೇಟ್ಲಿ
Published On :

ನವದೆಹಲಿ: ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ  ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ಅರುಣ್ ಜೇಟ್ಲಿಆಗಸ್ಟ್ 9 ರಿಂದ ದೆಹಲಿಯ ಏಮ್ಸ್ ಆಸ್ಪತ್ರೆ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಷ್ಟ್ರಪತಿಗಳ ಏಮ್ಸ್ ಭೇಟಿ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಆರೋಗ್ಯ ಇಲಾಖೆ ರಾಜ್ಯ ಸಚಿವೆ  ಅಶ್ವಿನಿ ಚೌಬೆ ಸಾಥ್ ನೀಡಿದ್ದಾರೆ.

ಮೂಲಗಳ ಪ್ರಕಾರ, 66 ವರ್ಷದ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಗಸ್ಟ್ 9 ರಿಂದ ಜೇಟ್ಲಿಯ ಆರೋಗ್ಯ ಸ್ಥಿತಿಯ ಬಗ್ಗೆ ಏಮ್ಸ್ ಯಾವುದೇ ಬುಲೆಟಿನ್ ನೀಡಿಲ್ಲ, ಅವರು ಉಸಿರಾಟ ಮತ್ತು ಹೃದಯದ ಬಡಿತದ ಕುರಿತು ದೂರಿತ್ತ ಬಳಿಕ ಅವರನ್ನು ಏಮ್ಸ್ ಗೆ ದಾಖಲಿಸಲಾಯಿತು

ಕಳೆದ ಶನಿವಾರ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಏಮ್ಸ್ ಗೆ ಭೇಟಿ ನೀಡಿ ಜೇಟ್ಲಿಯ ಆರೋಗ್ಯದ ಬಗ್ಗೆ ವಿಚಾರಿಸಿದಾಗ, ಮಾಜಿ ಸಚಿವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಕಚೇರಿ ತಿಳಿಸಿತ್ತು.

ವೃತ್ತಿಯಲ್ಲಿ ವಕೀಲರಾದ ಜೇಟ್ಲಿ, ಬಿಜೆಪಿ ಸರ್ಕಾರದ ಮೊದಲ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.