ಡಿಡಿ ನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನ
ಡಿಡಿನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನರಾಗಿದ್ದಾರೆ. ದೂರದರ್ಶನದಲ್ಲಿ ಕಳೆದ 20 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದ ನೀಲಂ ಶರ್ಮಾ ಇಂದು ಕೊನೆಯುಸಿರೆಳೆದಿದ್ದಾರೆ.

ನವದೆಹಲಿ: ಡಿಡಿನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನರಾಗಿದ್ದಾರೆ. ದೂರದರ್ಶನದಲ್ಲಿ ಕಳೆದ 20 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದ ನೀಲಂ ಶರ್ಮಾ ಇಂದು ಕೊನೆಯುಸಿರೆಳೆದಿದ್ದಾರೆ.
ಕ್ಯಾನ್ಸರ್ ನಿಂದ ನೀಲಂ ಶರ್ಮಾ ಬಳಲುತ್ತಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ. ಕಳೆದ 20 ವರ್ಷಗಳಿಂದಲೂ ಡಿಡಿ ನ್ಯೂಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೀಲಂ ಶರ್ಮಾ, ನಾರಿ ಶಕ್ತಿ ಪ್ರಶಸ್ತಿಗೆ ಭಾಜರಾಗಿದ್ದರು.
ಈ ವರ್ಷದ ಆರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೀಲಂ ಶರ್ಮಾ ಅವರಿಗೆ ನಾರಿ ಶಕ್ತಿ ಪ್ರಶಸ್ತಿ ನೀಡಿ ಗೌರವಿಸಿದ್ದರು. ಅವರ ನಿಧನಕ್ಕೆ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪದ ಮಹಾಪೂರವೇ ಹರಿದುಬರುತ್ತಿದೆ.
ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೊಡಿಯಾ, ಪ್ರಸಾರ ಭಾರತಿ ಸಿಇಒ ಶಶಿ ಶೇಕರ್ ಮತ್ತಿತರ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


