ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಪೊಲೀಸ್ ವಶಕ್ಕೆ
ಶಾಂತಿಗೆ ಭಂಗ ತರುವ ಆತಂಕದಿಂದ ಸಮಾಜ ಸೇವಕ ಮತ್ತು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಅವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಯೋಧ್ಯೆ: ಶಾಂತಿಗೆ ಭಂಗ ತರುವ ಆತಂಕದಿಂದ ಸಮಾಜ ಸೇವಕ ಮತ್ತು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಅವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 17 ಮತ್ತು 18 ರಂದು ವಿವಾದಿತ ಸ್ಥಳದ ಬಳಿ ಆಯೋಜಿಸಲಾಗಿದ್ದ ಸದ್ಭಾವನಾ ಸಮ್ಮೇಳನದ ಮುಖ್ಯ ಅತಿಥಿಯಾಗಿ ಸಂದೀಪ್ ಪಾಂಡೆ ಭಾಗವಹಿಸಿದ್ದರು. ಭದ್ರತಾ ಕಾರಣಗಳಿಂದಾಗಿ ಜಿಲ್ಲಾಡಳಿತ ಸಮ್ಮೇಳನಕ್ಕೆ ಅನುಮತಿಯನ್ನು ನಿರಾಕರಿಸಿ ಪಾಂಡೆ ಅವರನ್ನು ಮತ್ತೆ ಲಖನೌಗೆ ಕಳುಹಿಸಲಾಗಿತ್ತು. ಪಾಂಡೆ ಮತ್ತು ಅವರ ಸಹಚರರು ಪೊಲೀಸರಿಗೆ ಮಾಹಿತಿ ನೀಡದೆ ರಹಸ್ಯವಾಗಿ ಸಮ್ಮೇಳನವನ್ನು ಆಯೋಜಿಸಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಮಾಹಿತಿ ಪಡೆದು ಪಾಂಡೆ ಅವರನ್ನು ವಶಕ್ಕೆ ತೆಗೆದುಕೊಂಡು ಲಖನೌಗೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


