ದೇಶ

ಐಎನ್‌ಎಕ್ಸ್‌  ಹಗರಣ: ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ಐಎನ್‌ಎಕ್ಸ್‌  ಹಗರಣ: ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಚಿದಂಬರಂ
Published On :

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಚಿದಂಬರಂ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ಗೌರ್ ಅವರು ವಜಾಗೊಳಿಸಿದ್ದು, ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

2007ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಲ್ಲಿ ಕೆಲವು ಅವ್ಯವಹಾರ ಮೂಲಕ ಐಎನ್‌ಎಕ್ಸ್ ಮೀಡಿಯಾ ಹೌಸ್‌ಗೆ "ನೆರವು' ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದು, 305 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು 2007ರಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಸಂಬಂಧ ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಎರಡು ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.