ಚಂದ್ರನ ಕಕ್ಷೆ ಸೇರಿದ ಚಂದ್ರಯಾನ -2, ಇಸ್ರೋಗೆ ಪ್ರಧಾನಿ ಮೋದಿ ಅಭಿನಂದನೆ
ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ - 2 ಉಪಗ್ರಹ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಚೆನ್ನೈ: ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ - 2 ಉಪಗ್ರಹ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, 'ಚಂದ್ರನತ್ತ ಸಾಗಿರುವ ಪಯಣದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಇಸ್ರೋ ತಂಡಕ್ಕೆ ಅಭಿನಂದನೆಗಳು' ಎಂದಿದ್ದಾರೆ.
ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ -2 ಮಂಗಳವಾರ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಸೇರಿದ್ದು, ಈಗ ಚಂದ್ರನೂರಿನಲ್ಲಿ ತನ್ನ ಪಯಣ ಮುಂದುವರಿಸಲಿದೆ.
ಇಂದು ಬೆಳಗ್ಗೆ 9 ಗಂಟೆಗೆ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಚಟುವಟಿಕೆ ಆರಂಭಗೊಂಡು, 30 ನಿಮಿಷದ ನಂತರ ಚಂದ್ರಯಾನ -2 ಅನ್ನು ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಯಿತು. ಸದ್ಯ ಅದು 114*18,000 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಸಿವನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


