ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶಿ ಮಂತ್ರ ಜಪಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ವಾಯುಪಡೆಯನ್ನು ಆಧುನೀಕರಿಸುವ ಸಲುವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ವಿದೇಶಿ ಉತ್ಪಾದಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ವಾಯುಪಡೆಯನ್ನು ಆಧುನೀಕರಿಸುವ ಸಲುವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ವಿದೇಶಿ ಉತ್ಪಾದಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿಂದು ಭಾರತೀಯ ವಾಯುಪಡೆ ಆಧುನೀಕರಣ ಮತ್ತು ಸ್ವದೇಶಿ ಯೋಜನೆ ವಿಚಾರ ಕುರಿತು ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುದ್ದೋಪಕರಣಗಳಿಗಾಗಿ ವಿದೇಶಿ ತಯಾರಕರ ಮೇಲಿನ ಅವಲಂಬನೆ ಸಾಕಷ್ಟಿದೆ. ಇಂತಹ ಅವಲಂಬನೆಯನ್ನು ಕಡಿಮೆ ಮಾಡಿ ನಾವೇ ನಮ್ಮ ಸಾಮರ್ಥ್ಯದಿಂದ ಅಂತಹ ಉಪಕರಣಗಳನ್ನು ತಯಾರಿಸಿಕೊಳ್ಳುವಂತಾಗಬೇಕು ಎಂದರು.
ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಉದ್ಯಮಗಳ ಹೂಡಿಕೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಮೂಲಸೌಕರ್ಯ ಅಭಿವೃದ್ದಿ ಹಾಗೂ ಸ್ವದೇಶಿ ಅಭಿವೃದ್ಧಿ ಪ್ರೋತ್ಸಾಹಕ್ಕಾಗಿ ಹಲವಾರು ನೀತಿಗಳನ್ನು ಜಾರಿಗೊಳಿಸಲಾಗಿದೆ. ರಕ್ಷಣಾ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಗಮನಾರ್ಹ ಅಭಿವೃದ್ಧಿಯನ್ನು ತರಲು ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಉತ್ಪನ್ನಗಳನ್ನು ಉತ್ತೇಜಿಸಬೇಕಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


