ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ, ಚಿದಂಬರಂ ದೆಹಲಿ ನಿವಾಸಕ್ಕೆ ಮತ್ತೆ ಸಿಬಿಐ ಅಧಿಕಾರಿಗಳ ದೌಡು!
ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಿನ್ನೆ ಸಿಬಿಐ ಅಧಿಕಾರಿಗಳು ದೆಹಲಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಚಿದಂಬರಂ ನಾಪತ್ತೆಯಾಗಿದ್ದರು. ಇದೀಗ ಇಂದು ಬೆಳಗ್ಗೆ ಮತ್ತೆ ಅಧಿಕಾರಿಗಳು ಚಿದಂಬರಂ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ್ದು, ಶೋಧ ನಡೆಸಿದ್ದಾರೆ.
ನಿನ್ನೆ ದೆಹಲಿ ಹೈ ಕೋರ್ಟ್ ಪಿ.ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಇಡಿ (ಜಾರಿ ನಿರ್ದೇಶನಾಲಯ) ಮತ್ತು ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಬಂದಿದ್ದರು. ಆದರೆ ಚಿದಂಬರಂ ಅಲ್ಲಿ ಇರಲಿಲ್ಲ. 6:30 ಕ್ಕೆ ಮನೆಗೆ ಬಂದ ಅಧಿಕಾರಿಗಳು 10 ನಿಮಿಷಗಳ ನಂತರ ಅಲ್ಲಿಂದ ವಾಪಸ್ ತೆರಳಿದ್ದಾರೆ. ಸಿಬಿಐ ಅಧಿಕಾರಿಗಳು ಬಂದು ಹೋದ ಬೆನ್ನಲ್ಲೇ 7:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ಸಹ ಚಿದಂಬರಂ ಮನೆಗೆ ಬಂದಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಚಿದಂಬರಂ ಬಂಧನದಿಂದ ರಕ್ಷಣೆ ಪಡೆಯುವುದಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


