ಎಫ್‌ಡಿಐ ನಿಯಮ ಉಲ್ಲಂಘನೆ: ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್ ವಿರುದ್ಧ ಸಿಬಿಐನಿಂದ ಪ್ರಕರಣ
ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್, ಅವರ ಪತ್ನಿ ರಾಧಿಕಾ ರಾಯ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ನವದೆಹಲಿ: ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್, ಅವರ ಪತ್ನಿ ರಾಧಿಕಾ ರಾಯ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕ್ರಿಮಿನಲ್ ಪಿತೂರಿ, ಮೋಸ ಮತ್ತು ಭ್ರಷ್ಟಾಚಾರದ ಆರೋಪದಡಿ ಮಾಜಿ ಸಿಇಒ ವಿಕ್ರಮಾದಿತ್ಯ ಚಂದ್ರ ವಿರುದ್ಧವೂ ಸಂಸ್ಥೆ ದೂರು ದಾಖಲಿಸಿಕೊಂಡಿದೆ. ನಿಯಮ ಉಲ್ಲಂಘಿಸಿ ವಾಮಮಾರ್ಗದಿಂದ ವಿದೇಶಿ ಹಣವನ್ನು ಭಾರತಕ್ಕೆ ತರಲು ಕಂಪನಿಯು ಹಲವಾರು ತೆರಿಗೆ ನಿಯಮಾವಳಿ ಉಲ್ಲ್ಂಘಿಸಿದೆ. ಶಾಮ್ ಟ್ರಾನ್ಸಾಕ್ಷನ್ ಮೂಲಕ ಸಂಸ್ಥೆ ಈ ವಂಚನೆ ನಡೆಸಿದ್ದು ಕಂಪನಿಯು ತೆರಿಗೆ ಸ್ವರ್ಗದಂತಹಾ ರಾಷ್ಟ್ರಗಳಲ್ಲಿ 32 ಅಂಗಸಂಸ್ಥೆಗಳನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


