ಉತ್ತರಾಖಂಡ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್ ಪತನ, ಮೂವರು ಸಾವು
ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪತನವಾಗಿದ್ದು, ದುರಂತದಲ್ಲಿ ಮೂವರು ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಸಾಗಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪತನವಾಗಿದ್ದು, ದುರಂತದಲ್ಲಿ ಮೂವರು ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ.
ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಪರಿಹಾರ ಸಾಮಗ್ರಿಯನ್ನು ಹೆರಿಟೇಜ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಹೊತ್ತೊಯ್ಯಲಾಗುತ್ತಿತ್ತು. ಡೆಹ್ರಾಡೂನ್ನಿಂದ ಪರಿಹಾರ ಸಾಮಗ್ರಿ ಹೊತ್ತ ಹೆಲಿಕಾಪ್ಟರ್ ಉತ್ತರಾಕಾಶಿಯ ಅರ್ಕೋಟ್ ಗ್ರಾಮದಲ್ಲಿ ಕೆಲವೊಂದು ಸಾಮಗ್ರಿಯನ್ನು ಇಳಿಸಿತ್ತು. ನಂತರ ಮೋಲ್ಡಿ ಗ್ರಾಮಕ್ಕೆ ಹೆಲಿಕಾಪ್ಟರ್ ತೆರಳುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ವಿದ್ಯುತ್ ತಂತಿಗೆ ಡಿಕ್ಕಿ ಹೊಡೆದು ಪತನಗೊಂಡಿದೆ.
ದುರ್ಘಟನೆಯಲ್ಲಿ ಪೈಲಟ್ಗಳಾದ ರಾಜ್ಪಾಲ್, ಕ್ಯಾಪ್ಟನ್ ಲಾಲ್ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ನಿವಾಸಿ ರಮೇಶ್ ಸಾವರ್ ಎಂಬುವವರು ಮೃತಪಟ್ಟಿದ್ದಾರೆ.
ಎಲ್ಲರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


