ರಾಜಸ್ಥಾನ: ವಾಯುಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ಕಂದಕಕ್ಕೆ ಉರುಳಿ ಮೂವರು ಸಾವು
ಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಬಾರ್ಮರ್: ಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಬಗ್ಗೆ ಬಾರ್ಮರ್ ಜಿಲ್ಲೆಯ ಎಸ್ಪಿ ಶಿವರಾಜ್ ಮೀನಾ ಮಾಹಿತಿ ನೀಡಿದ್ದು, ಟ್ರಕ್ನಲ್ಲಿ ಒಟ್ಟು ಎಂಟು ಮಂದಿ ಯೋಧರು ಪ್ರಯಾಣಿಸುತ್ತಿದ್ದರು. ಇವರೆಲ್ಲ ಚೌಹತನ್ ಪಟ್ಟಣದಲ್ಲಿರುವ ಸೇನಾಪಡೆಯ ವಿಮಾನ ನಿಲ್ದಾಣದಿಂದ ಆಗಮಿಸುತ್ತಿದ್ದರು. ಟ್ರಕ್ ಸಮತೋಲನ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು ಹೇಳಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


