ದೇಶ

ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಭಲ್ಲ ನೇಮಕ

ಕೇಂದ್ರ ಸರ್ಕಾರ ನೂತನ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಜಯ್ ಕುಮಾರ್ ಭಲ್ಲ ಅವರನ್ನು ಗುರುವಾರ ನೇಮಕ ಮಾಡಿದೆ.

ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಭಲ್ಲ ನೇಮಕ
ಅಜಯ್ ಕುಮಾರ್ ಭಲ್ಲ
Published On :

ನವದೆಹಲಿ: ಕೇಂದ್ರ ಸರ್ಕಾರ ನೂತನ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಜಯ್ ಕುಮಾರ್ ಭಲ್ಲ ಅವರನ್ನು ಗುರುವಾರ ನೇಮಕ ಮಾಡಿದೆ.

ಕಳೆದ ಜುಲೈ 24ರಂದು ಮಾಜಿ ಇಂಧನ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲ ಅವರನ್ನು ಕೇಂದ್ರ ಗೃಹ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಮೇಲೆ ನೇಮಕ ಮಾಡಲಾಗಿತ್ತು. ಇದೀಗ ಅಧಿಕೃತವಾಗಿ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಸಮಿತಿ ಇಂದು ಭಲ್ಲ ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ.

1984ನೇ ಬ್ಯಾಚ್ ಅಸ್ಸಾಂ, ಮೇಘಾಲಯ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಭಲ್ಲ ಅವರು ಎರಡು ವರ್ಷಗಳ ಕಾಲ, ಅಂದರೆ ಆಗಸ್ಟ್ 2021ರ ವರೆಗೆ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ರಾಜೀವ್ ಗೌಬಾ ಹಾಲಿ ಗೃಹ ಕಾರ್ಯದರ್ಶಿಯಾಗಿದ್ದು, ಆಗಸ್ಟ್ 31ಕ್ಕೆ ಅವರ ಅಧಿಕಾರವಧಿ ಪೂರ್ಣಗೊಳ್ಳಲಿದೆ. ಅವರ ಸ್ಥಾನಕ್ಕೆ ಭಲ್ಲ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.