ಬ್ಯಾಂಕ್ ಹಗರಣ: ಮತ್ತೋರ್ವ ಮಾಜಿ ಕೇಂದ್ರ ಸಚಿವರಿಗೆ ಸಂಕಷ್ಟ, ಎಫ್ಐಐ ದಾಖಲಿಸಲು ಕೋರ್ಟ್ ಸೂಚನೆ
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

ಮುಂಬೈ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.
1,000 ಕೋಟಿ ರೂಪಾಯಿ ಹಗರಣದಲ್ಲಿ 70 ಜನರ ವಿರುದ್ಧ 5 ದಿನಗಳಲ್ಲಿ ಎಫ್ಐಆರ್ ದಾಖಲಿಸಲು ನ್ಯಾ.ಎಸ್ ಸಿ ಧರ್ಮಾಧಿಕಾರಿ ಹಾಗೂ ನ್ಯಾ. ಎಸ್ ಕೆ ಶಿಂಧೆ ಅವರಿದ್ದ ವಿಭಾಗೀಯ ಪೀಠ.
ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಧಾರಗಳಿದ್ದು, ಆರ್ಥಿಕ ಅಪರಾಧಗಳ ವಿಭಾಗಕ್ಕೆ ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಕೋರ್ಟ್ ಹೇಳಿದೆ.
ಶರದ್ ಪವಾರ್, ಮಾಜಿ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಗಳು ಹಾಗೂ ಸರ್ಕಾರಿ, ಬ್ಯಾಂಕ್ ಅಧಿಕಾರಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಎಂ ಅರೋರಾ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


