ಐಎನ್‌ಎಕ್ಸ್ ಮೀಡಿಯಾ ಪ್ರಕರಣ:ಆಗಸ್ಟ್ 26ರವರೆಗೆ ಸಿಬಿಐ ಕಸ್ಟಡಿಗೆ ಚಿದಂಬರಂ
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ನಿವಾಸದಿಂದ ಬುಧವಾರ ರಾತ್ರಿ ಬಂಧಿಸಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಇಂದು ಆಗಸ್ಟ್ 26 ರವರೆಗೆವಶಕ್ಕೆ ಪಡೆದಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ನಿವಾಸದಿಂದ ಬುಧವಾರ ರಾತ್ರಿ ಬಂಧಿಸಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಇಂದು ಆಗಸ್ಟ್ 26 ರವರೆಗೆವಶಕ್ಕೆ ಪಡೆದಿದೆ.
ಪಿ.ಚಿದಂಬರಂ ಅವರನ್ನು ಇಂದು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯ ನಂತರ, ಯಾಲಯವು ಆಗಸ್ಟ್ 26 ರವರೆಗೆ ಕಾಂಗ್ರೆಸ್ ನಾಯಕನನ್ನು ಕೇಂದ್ರ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಿತು. ಸಿಬಿಐ ವಕ್ತಾರರು ಈ ಹಿಂದೆ ಚಿದಂಬರಂ ಅವರನ್ನುನ್ಯಾಯಾಲಯ ಹೊರಡಿಸಿದ ವಾರಂಟ್‌ನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದರು.
ಅವರ ಬಂಧನದ ಬಳಿಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ಸಿಬಿಐ ಕೇಂದ್ರ ಕಚೇರಿಯಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬೃಹನ್ನಾಟಕದ ನಂತರ ಮಾಜಿ ಹಣಕಾಸು ಸಚಿವರ ಬಂಧನವಾಗಿದ್ದು ಗುರುವಾರ ಸಿಬಿಐ ಚಿದಂಬರಂ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯವನ್ನು ಕೋರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


