ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ರಕ್ಷಣಾ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ನೇಮಕ
ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಅವರನ್ನು ನೇಮಕ ಮಾಡಿದೆ.

ರಕ್ಷಣಾ ಉತ್ಪಾದನಾ ಕಾರ್ಯದರ್ಶಿಯಾಗಿ ಕರ್ನಾಟಕದ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ನೇಮಕ
ನವದೆಹಲಿ: ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಅವರನ್ನು ನೇಮಕ ಮಾಡಿದೆ.
ಅಂತೆಯೇ ರಕ್ಷಣಾ ಇಲಾಖೆ ಕರ್ನಾಟಕದ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಅವರು ಸೇರ್ಪಡೆಗೊಂಡಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ಹಿರಿಯ ಅಧಿಕಾರಿ (1986 ಬ್ಯಾಚ್ ) ಸುಭಾಷ್ ಚಂದ್ರ ಅವರನ್ನು ರಕ್ಷಣಾ ಉತ್ಪಾದನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಅಜಯ್ ಕುಮಾರ್ ಅವರನ್ನು ನೂತನ ರಕ್ಷಣಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಈ ಹುದ್ದೆಯಲ್ಲಿದ್ದ ಸಂಜಯ್ ಮಿತ್ರ ಅವರ ಅಧಿಕಾರಾವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ರಕ್ಷಣಾ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ. ಅಂತೆಯೇ ಪ್ರಸ್ತುತ ಹಿಮಾಚಲ ಪ್ರದೇಶ ಮೂಲಕ ಐಎಎಸ್ ಅಧಿಕಾರಿ ಬ್ರಿಜ್ ಕುಮಾರ್ ಅಗರ್ವಾಲ್ ಅವರನ್ನು ಲೋಕಪಾಲ ಮತ್ತು ಕೇಂದ್ರ ಸರ್ಕಾರದ ವೇತನ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


