ದೇಶ

ನ್ಯಾಯಾಲಯಕ್ಕೆ ಪಿ. ಚಿದಂಬರಂ ಹಾಜರುಪಡಿಸಿದ ಸಿಬಿಐ, ಐದು ದಿನ  ವಶಕ್ಕೆ ನೀಡುವಂತೆ ಮನವಿ

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಇಂದು ನ್ಯಾಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು.

ನ್ಯಾಯಾಲಯಕ್ಕೆ ಪಿ. ಚಿದಂಬರಂ ಹಾಜರುಪಡಿಸಿದ ಸಿಬಿಐ, ಐದು ದಿನ  ವಶಕ್ಕೆ ನೀಡುವಂತೆ ಮನವಿ
ಪಿ. ಚಿದಂಬರಂ
Published On :

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಇಂದು ನ್ಯಾಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು. 

ವಿಶೇಷ ನ್ಯಾಯಾಧೀಶ  ಅಜಯ್ ಕುಮಾರ್ ಪ್ರಕರಣದ  ವಿಚಾರಣೆ ನಡೆಸುತ್ತಿದ್ದು, ಮಾಜಿ ರಕ್ಷಣಾ ಸಚಿವರನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಬಿಐ ಪರ ವಾದ ಮಂಡಿಸಿ,  ಪಿ. ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಯಾವುದೇ ತನಿಖೆಗೂ ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ. ಮೌನ ಅವರ ಸಾಂವಿಧಾನಿಕ ಹಕ್ಕು, ಆದರೆ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ ಎಂದರು.

ಇತರ ಆರೋಪಿಗಳೊಂದಿಗೆ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ಅವರನ್ನು ಸಿಬಿಐ ವಶಕ್ಕೆ ನೀಡುವಂತೆ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಕೋರ್ಟ್ ರೂಮಿಗೆ ಆಗಮಿಸುತ್ತಿದ್ದಂತೆ ಪಿ. ಚಿದಂಬರಂ ಕಾಂಗ್ರೆಸ್ ನಾಯಕರು ಹಾಗೂ ಹಿರಿಯ ವಕೀಲರಾದ ಕಪೀಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಹಾಗೂ ವಿವೇಕ್ ಟಂಕಾ ಅವರೊಡನೆ ಮಾತನಾಡುತ್ತಿರುವ ದೃಶ್ಯ ಕಂಡುಬಂದಿತು.

ಪಿ. ಚಿದಂಬರಂ ಪತ್ನಿ ನಳಿನಿ ಹಾಗೂ ಕಾರ್ತಿ ಚಿದಂಬರಂ ಕೂಡಾ ಕೋರ್ಟ್ ರೂಮಿನಲ್ಲಿ ಕಂಡುಬಂದರು. ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. 

Related Article

ಚಿದಂಬರಂ ಬಂಧನಕ್ಕೆ ಇಂದ್ರಾಣಿ ಹೇಳಿಕೆಯೇ ಪ್ರಮುಖ ಸಾಕ್ಷಿ, ಆಧಾರ !!

ಸಿಬಿಐ, ಇಡಿ, ವೈಯುಕ್ತಿಕ ಸೇಡು ತೀರಿಸಿಕೊಳ್ಳುವ ಇಲಾಖೆಗಳಾಗಿವೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಪಿ ಚಿದಂಬರಂ ಬಂಧನ ಬೆನ್ನಲ್ಲೇ, ಅಮಿತ್ ಶಾರ ಹಳೆಯ ವಿಡಿಯೋ ವೈರಲ್!

'ಐಎನ್ ಎಕ್ಸ್ ಮೀಡಿಯಾ ಕೇಸು';ಏನಿದು,ಚಿದಂಬರಂಗೆ ಏನು ಸಂಬಂಧ?

ದೇಗುಲ ನೆಲಸಮ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

ನವದೆಹಲಿ: ಜಂತರ್ ಮಂಥರ್  ಬಳಿ ಪ್ರತಿಭಟನೆ-ಕಾರ್ತಿ ಚಿದಂಬರಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.