ದೇಶ

ಚಂದ್ರಯಾನ-2 ಯಶಸ್ಸಿನ ರೂವಾರಿ,  ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಚಂದ್ರಯಾನ-2 ಯಶಸ್ಸಿನ ರೂವಾರಿ,  ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ
ಕೆ ಶಿವನ್
Published On :

ಚೆನ್ನೈ: ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ  ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಇತ್ತೀಚೆಗೆ ಚಂದ್ರಯಾನ--2 ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ಇದರ  ನೇತೃತ್ವ ವಹಿಸಿದ್ದ ಕೈಲಸಾವಾಡಿವು ಶಿವನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ವಿಜ್ಞಾನ ತಂತ್ರಜ್ಞಾನದ ಜಗತ್ತಿನಲ್ಲಿ ಸಂತಸ ತಂದಿದೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಶಿವನ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಶಿವನ್ ಅವರು ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚೆನ್ನೈನಲ್ಲಿನ ಸಮಾರಂಬದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗದ ಕಾರಣ ಇಂದು ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ.

ಪ್ರಶಸ್ತಿ 8 ಗ್ರಾಂ ಚಿನ್ನದ ಪದಕ, ರೂ. ಐದು ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.