ದೇಶ

ಎಲ್ಲದಕ್ಕೂ ಮೋದಿ ನಿಂದಿಸುವುದು ಸರಿಯಲ್ಲ: ಪಿಎಂ ಪರ ಜೈರಾಮ್ ಬಳಿಕ ಮತ್ತೋರ್ವ 'ಕೈ' ನಾಯಕ ಬ್ಯಾಟಿಂಗ್!

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನವನ್ನು ವಿರೋಧಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಕಿಡಿಕಾರಿದ ಬೆನ್ನಲ್ಲೇ ಇದೀಗ...

ಎಲ್ಲದಕ್ಕೂ ಮೋದಿ ನಿಂದಿಸುವುದು ಸರಿಯಲ್ಲ: ಪಿಎಂ ಪರ ಜೈರಾಮ್ ಬಳಿಕ ಮತ್ತೋರ್ವ 'ಕೈ' ನಾಯಕ ಬ್ಯಾಟಿಂಗ್!
ಮೋದಿ-ಅಭಿಶೇಕ್ ಸಿಂಘ್ವಿ-ಜೈರಾಮ್
Published On :

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನವನ್ನು ವಿರೋಧಿಸಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಕಿಡಿಕಾರಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮತ್ತು ಅಭಿಶೇಖ್ ಮನು ಸಿಂಘ್ವಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ.

ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರತಿಯೊಂದು ಸಂದರ್ಭದಲ್ಲೂ ಪ್ರಧಾನಿ ಮೋದಿಯನ್ನು ರಾಕ್ಷಸೀಕರಣಗೊಳಿಸುವುದು ತಪ್ಪು ಎಂದು ಕಾಂಗ್ರೆಸ್ ನಾಯಕ ಅಭಿಶೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಪ್ರಧಾನಿ ಹುದ್ದೆಯಲ್ಲಿರುವವರು ದೇಶವನ್ನು ಪ್ರತಿನಿಧಿಸುತ್ತಾರೆ. ಆ ಸ್ಥಾನದಲ್ಲಿರುವ ವ್ಯಕ್ತಿಯ ನಿರ್ಧಾರಗಳು ಸರಿಯಾಗಿರಬಹುದು ಅಥವಾ ತಪ್ಪಾಗಿರಬಹುದು. ಆದರೆ ಅದನ್ನು ಖಂಡಿಸುವ ಮೊದಲು ಯೋಚನೆ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ. 

ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನು ಟೀಕಿಸುತ್ತಾ, ಋಣಾತ್ಮಕ ಕಥೆಗಳನ್ನು ಹೇಳುತ್ತಿದ್ದರೆ ದೇಶದ ಉದ್ಧಾರ ಸಾಧ್ಯವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.