ಅರುಣ್ ಜೇಟ್ಲಿ ನಿಧನ: ಅಗಲಿದ ನಾಯಕನಿಗೆ ಗಣ್ಯರ ಕಂಬನಿ
ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು; ಅವರಿಗೆ 66 ವರ್ಷ ವಯಸ್ಸಾಗಿತ್ತು. ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮೂಲಕ ಜೇಟ್ಲಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಅಂತೆಯೇ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಸಿಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮೂಲಕ ಅರುಣ್ ಜೇಟ್ಲಿ ಅವರಿಗೆ ಭಾವುಕ ವಿದಾಯ ಹೇಳಿದ್ದಾರೆ.
A great Orator and an excellent Human Being, Sri @arunjaitley always placed the interests of the Nation and @BJP4India above His own.
— C T Ravi
In Sri Jaitley's shocking death we have not only lost one of Our finest Leader but the Nation has also lost a great Institution. pic.twitter.com/cxPmZbxbaj
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


