ತಮಿಳುನಾಡು: ಕಾಂಚೀಪುರಂನಲ್ಲಿ ಸ್ಫೋಟ: ಒಬ್ಬರು ದುರ್ಮರಣ, ಐವರಿಗೆ ಗಾಯ
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಒಬ್ಬರು ದುರ್ಮರಣ ಹೊಂದಿದ್ದು, ಐವರು ಗಾಯಗೊಂಡಿದ್ದಾರೆ.

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಒಬ್ಬರು ದುರ್ಮರಣ ಹೊಂದಿದ್ದು, ಐವರು ಗಾಯಗೊಂಡಿದ್ದಾರೆ.
ದೇವಾಲಯದ ಕೊಳವೊಂದರಲ್ಲಿ ಪತ್ತೆಯಾದ ಅಪರಿಚಿತ ವಸ್ತುವೊಂದು ಇದ್ದಕ್ಕಿದ್ದಂತೆ ಸ್ಫೋಟಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ, ಇದಕ್ಕೂ ಉಗ್ರರ ಭೀತಿಗೂ ಸಂಪರ್ಕವಿಲ್ಲ ಎಂಬುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿರೋಧಕ ಸಿಬ್ಬಂದಿ ತಪಾಸಣೆ ನಡೆಸಿದ್ದು, ಇದೊಂದು ಸ್ಫೋಟಕ ವಸ್ತು ಎಂಬುದನ್ನು ದೃಢಪಡಿಸಿದ್ದಾರೆ.
ಮನಂಪತಿಯಲ್ಲಿ ದೇವಾಲಯ ಬಳಿಯ ಕೊಳದಲ್ಲಿ ಪತ್ತೆಯಾದ ವಸ್ತುವನ್ನು ಹೊರಗೆ ತೆಗೆಯಲು ಪ್ರಯತ್ನಿಸಿದ ಯುವಕ ಮೃತಪಟ್ಟಿದ್ದಾನೆ. ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇದ್ದಕ್ಕಿದ್ದಂತೆ ಸ್ಫೋಟದ ಶಬ್ದ ಕೇಳಿ ಶಾಕ್ ಆಯಿತು. ಆದರೆ, ಇಲ್ಲಿ ಬಂದು ನೋಡಿದಾಗ ಇದು ಬೇರೆ ರೀತಿಯ ಸ್ಫೋಟವಾಗಿತ್ತು. ಗಾಯಾಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


