ಸುಷ್ಮಾ, ಜೇಟ್ಲಿ ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ: ಸಾಧ್ವಿ ಪ್ರಗ್ಯಾ
ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಳೆದ ಒಂದು ತಿಂಗಳಲ್ಲೇ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಸಾವು ಸಂಭವಿಸಿದೆ. ಇದಕ್ಕೆಲ್ಲಾ ವಿಪಕ್ಷಗಳ ಮಾಟ ಮಂತ್ರ ಕಾರಣ. ಬಿಜೆಪಿ ವಿರುದ್ಧ ವಿಪಕ್ಷಗಳು ದುಷ್ಟ ಶಕ್ತಿಗಳ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಒಂದು ಸಲ ಮಹಾರಾಜ್ ಜಿ ನನಗೆ ನಿಮ್ಮ ಕೆಟ್ಟ ದಿನಗಳು ಶುರುವಾದವು. ವಿರೋಧಪಕ್ಷಗಳು ಬಿಜೆಪಿ ಮೇಲೆ ದುಷ್ಟ ಶಕ್ತಿಯ ಪ್ರಯೋಗ ಮಾಡಲಿವೆ ಎಂದಿದ್ದರು. ಆದರೆ ಅದಕ್ಕೆ ನಾನು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ ನಮ್ಮ ಪಕ್ಷದ ಮಹಾನ್ ನಾಯಕರಿಬ್ಬರು ಸಾವನ್ನಪ್ಪಿದ ಮೇಲೆ ಅದರ ಬಗ್ಗೆ ನಾನು ಯೋಚಿಸಬೇಕಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


