ದೇಶ

ಕೇಂದ್ರ ಸರ್ಕಾರದಿಂದ ಆರ್‌ಬಿಐ ಮೀಸಲು ಹಣ ಲೂಟಿ; ರಾಹುಲ್ ಗಾಂಧಿ ಟೀಕೆ

ಆರ್‌ಬಿಐನಿಂದ ಕೇಂದ್ರ ಸರ್ಕಾರ 1.76 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಆರ್‌ಬಿಐ ಮೀಸಲು ಹಣ ಲೂಟಿ; ರಾಹುಲ್ ಗಾಂಧಿ ಟೀಕೆ
ರಾಹುಲ್ ಗಾಂಧಿ
Published On :

ನವದೆಹಲಿ: ಆರ್‌ಬಿಐನಿಂದ ಕೇಂದ್ರ ಸರ್ಕಾರ 1.76 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.  

ಆರ್‌ಬಿಐನಿಂದ ಹೆಚ್ಚುವರಿ ಹಣವನ್ನು ಸರ್ಕಾರ ಲೂಟಿ ಮಾಡಿದೆ ಎಂದು ಅವರು ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸರಿದಾರಿಗೆ ತರುವಲ್ಲಿ ದಿಕ್ಕು ತೋಚದೆ ಆರ್‌ಬಿಐನ ಮೀಸಲು ಹಣವನ್ನು ಲೂಟಿ ಮಾಡಿದೆ ಎಂದು ದೂರಿದ್ದಾರೆ. 

ಸರ್ಕಾರದ ಕ್ರಮ ಹೇಗಿದೆ ಎಂದರೆ ಆಸ್ಪತ್ರೆಯಿಂದ ಬ್ಯಾಂಡ್-ಏಡ್ ಕಳವು ಮಾಡಿ ಗುಂಡೇಟಿನಿಂದ ಆದ ಗಾಯಕ್ಕೆ ಕಟ್ಟಿದಂತಾಗಿದೆ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ವಸತಿಯಿಂದ ಉತ್ಪಾದನೆಯವರೆಗೆ ದೇಶದ ಎಲ್ಲಾ ವಲಯಗಳಲ್ಲಿ ಆರ್ಥಿಕ ಕುಸಿತದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆರ್‌ಬಿಐನಿಂದ ಭಾರಿ ದೊಡ್ಡ ಮೊತ್ತದ ಹಣವನ್ನು ಪಡೆದಿದೆ. ಆರ್‌ಬಿಐನ ಈ ರೀತಿಯ ಶೋಷಣೆ ದೇಶದ ಆರ್ಥಿಕತೆಯ ಮತ್ತಷ್ಟು ಕ್ಷೀಣಿಸಲು ದಾರಿ ಮಾಡಿಕೊಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.