ದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ನಾಗರೀಕರ ಅಪಹರಿಸಿ ಭೀಕರ ಕೊಲೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಬ್ಬರು ನಾಗರಿಕರನ್ನು ಅಪಹರಿಸಿ ಭೀಕರವಾಗಿ ಕೊಲೆ ಗೈದಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ನಾಗರೀಕರ ಅಪಹರಿಸಿ ಭೀಕರ ಕೊಲೆ!
ಸಂಗ್ರಹ ಚಿತ್ರ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಬ್ಬರು ನಾಗರಿಕರನ್ನು ಅಪಹರಿಸಿ ಭೀಕರವಾಗಿ ಕೊಲೆ ಗೈದಿದ್ದಾರೆ.

ನಿನ್ನೆ ಪುಲ್ವಾಮದಲ್ಲಿ ಅಬ್ ಖದೀರ್ ಕೊಹ್ಲಿ ಮತ್ತು ಮಂಜೂರ್ ಅಹ್ಮದ್ ಕೊಹ್ಲಿ ಎಂಬುವವರನ್ನು ಉಗ್ರರು ಅಪಹರಿಸಿದ್ದರು. ಈ ಸಂಬಂದ ಪೊಲೀಸ್ ದೂರು ಕೂಡ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ತ್ರಾಲ್ ನಲ್ಲಿರುವ ಲಾಚಿ ಟಾಪ್ ಬೆಹಕ್ ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದೆ.

ಕೊಲೆಗೂ ಮುನ್ನ ಇಬ್ಬರ ಮೇಲೂ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ದೇಹಗಳನ್ನು ಪೊಲೀಸರು ಸಂತ್ರಸ್ಥರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಹರಣಕಾರ ಉಗ್ರರು ಮತ್ತು ಅವರಿಗೆ ನೆರವು ನೀಡಿದವರ ಕುರಿತು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.