ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ: ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ವಿದೇಶಿ ನೇರ ಹೂಡಿಕೆಯಲ್ಲಿ ವಿದೇಶಿ ಸಿಂಗಲ್ ಬ್ರಾಂಡ್ ವ್ಯಾಪಾರಿಗಳಿಗೆ ಬುಧವಾರ ಕೇಂದ್ರ ಸರ್ಕಾರ ನಿಯಮ ಸಡಿಲಿಕೆ ಮಾಡಿದೆ. ಅಂತೆಯೇ ಗುತ್ತಿಗೆ ಉತ್ಪಾದನೆ ಮತ್ತು ಕಲ್ಲಿದ್ದಲು ಗಣಿಗಾರಿಕೆಗೆ ವಿದೇಶ ಹೂಡಿಕೆಗೆ ಅವಕಾಶ ನೀಡಿದೆ.
ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿದೆ. ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಬಂಧಿತ ಮೂಲಸೌಕರ್ಯದಲ್ಲಿ ಶೇ.100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಅಂತೆಯೇ ದೇಶೀಯ ಉತ್ಪಾದನೆ ಹೆಚ್ಚಿಸಲು, ಎಫ್ಡಿಐನಲ್ಲಿ ಸ್ವಯಂಚಾಲಿತ ಮಾರ್ಗದಡಿ ಗುತ್ತಿಗೆ ಉತ್ಪಾದನೆಯಲ್ಲಿ ಶೇ.100ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ ಇದಲ್ಲದೆ ಡಿಜಿಟಲ್ ಮಾಧ್ಯಮದಲ್ಲಿ ಶೇ.26ಎಷ್ಟು ಎಫ್ಡಿಐಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಎಫ್ಡಿಐ ಮೇಲೆ ಸಿಂಗಲ್ ಬ್ರಾಂಡ್ ವ್ಯಾಪಾರಿಗಳಿಗೆ ಶೇ.30ರಷ್ಟು ದೇಶೀಯ ಸಂಪನ್ಮೂಲವನ್ನು ಬಳಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಿಂಗಲ್ ಬ್ರಾಂಡ್ ವ್ಯಾಪಾರಿಗಳು ಆನ್ ಲೈನ್ನಲ್ಲಿ ವ್ಯಾಪಾರ ಆರಂಭಿಸಬಹುದಾಗಿದೆ ಎಂದು ಗೋಯಲ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


