ಸಿಬಿಐ ಬಂಧನದಲ್ಲಿರುವ ಚಿದಂಬರಂಗೆ ಸೆ.5ರವರೆಗೆ ಇಡಿಯಿಂದ ರಿಲೀಫ್!
ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಸದ್ಯ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಸಿಬಿಐ ವಶದಲ್ಲಿದ್ದು ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ಸೆಪ್ಟೆಂಬರ್ 5ರವರೆಗೂ ಕಾಯುವಂತೆ ಸುಪ್ರೀಂ ಹೇಳಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಸದ್ಯ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಸಿಬಿಐ ವಶದಲ್ಲಿದ್ದು ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಚಿದಂಬರಂಗೆ ಸೆಪ್ಟೆಂಬರ್ 5ರವರೆಗೂ ಕಾಯುವಂತೆ ಸುಪ್ರೀಂ ಹೇಳಿದೆ.
ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ನಿರ್ಧರಿಸಿತ್ತು. ಈ ಸಂಬಂಧ ಚಿದಂಬರಂ ನಿರೀಕ್ಷಣಾ ಜಾಮೀನು ಕೋರಿದ್ದರು. ಈ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಇನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ಪ್ರಶ್ನಿಸಿ ಚಿದಂಬರಂ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 2ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ಇನ್ನು ಸೆ.2ರಂದು ಚಿದಂಬರಂಗೆ ಕೋರ್ಟ್ ಜಾಮೀನು ನೀಡಿದರೆ ನಂತರ ಇಡಿ ತನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


