ಆರ್ಟಿಕಲ್ 370 ರದ್ದಾಗಿನಿಂದ 222 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ!
ಆರ್ಟಿಕಲ್ 370 ರದ್ದಾಗಿನಿಂದ ಭಾರತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಪಾಕಿಸ್ತಾನ ಈ ವರೆಗೂ ಬರೊಬ್ಬರಿ 222 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಶ್ರೀನಗರ: ಆರ್ಟಿಕಲ್ 370 ರದ್ದಾಗಿನಿಂದ ಭಾರತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಪಾಕಿಸ್ತಾನ ಈ ವರೆಗೂ ಬರೊಬ್ಬರಿ 222 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ.
ಆ.05 ರಿಂದ ನಿರಂತರವಾಗಿ ಪಾಕಿಸ್ತಾನ ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಈ ಮೂಲಕ ಪಾಕಿಸ್ತಾನ ಒಂದು ವರ್ಷದಲ್ಲಿ ಬರೊಬ್ಬರಿ 1,900 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದಂತಾಗಿದೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದ 10 ಘಟನೆಗಳು ನಡೆದಿದ್ದವು.
ಕಾಶ್ಮೀರವನ್ನು ಅಂತಾರಾಷ್ಟ್ರೀಯ ವಿಷಯವನ್ನಾಗಿಸುವುದಕ್ಕೆ ಪಾಕಿಸ್ತಾನ ಯತ್ನಿಸುತ್ತಿದ್ದು ಭಾರತದೊಳಗೆ ನುಸುಳಲು ಭಯೋತ್ಪಾದಕರಿಗೆ ಸಹಕಾರ ನೀಡುತ್ತಿದೆ. ಮತ್ತೊಂದು ಕಡೆಯಿಂದ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದು, ಪಾಕಿಸ್ತಾನದಿಂದ ಭಯೋತ್ಪಾದಕರು ಒಳನುಸುಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


