ಸೆ.2 ವರೆಗೂ ಸಿಬಿಐ ವಶದಲ್ಲೇ ಇರುತ್ತೇನೆ- ಸುಪ್ರೀಂ ಕೋರ್ಟ್ ಗೆ ಚಿದಂಬರಂ ಮನವಿ
ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸೆ.02 ರ ವರೆಗೆ ಸಿಬಿಐ ವಶದಲ್ಲೇ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸೆ.02 ರ ವರೆಗೆ ಸಿಬಿಐ ವಶದಲ್ಲೇ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.
ಆ.21 ರಂದು ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಚಿದಂಬರಂ ಗೆ ಆ.30ರ ವರೆಗೆ ಸಿಬಿಐ ಕಸ್ಟಡಿ ವಿಧಿಸಲಾಗಿತ್ತು. ಈಗ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೋರ್ಟ್ ಎದುರು ಹಾಜರುಪಡಿಸಲಾಗುತ್ತದೆ. ಆದರೆ ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿರುವ ಚಿದಂಬರಂ ಪರ ವಕೀಲರು ಸೆ.2ರ ವರೆಗೆ ಸಿಬಿಐ ವಶದಲ್ಲೇ ಇರಲು ಚಿದಂಬರಂ ಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
ಆರ್. ಭಾನುಮತಿ ಹಾಗೂ ಎಎಸ್ ಬೋಪಣ್ಣ ಅವರಿದ್ದ ವಿಭಾಗೀಯ ಪೀಠದೆದುರು ಚಿದಂಬರಂ ಈ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯ ತಮ್ಮನ್ನು ಸಿಬಿಐ ವಶಕ್ಕೆ ನೀಡಿರುವುದು ಹಾಗೂ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿರುವುದನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸೆ.2 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಸೆ.02 ವರೆಗೆ ಸಿಬಿಐ ವಶದಲ್ಲೇ ಇರುತ್ತೇನೆ ಎಂಬ ಚಿದಂಬರಂ ಮನವಿ ಬಗ್ಗೆ ಕೋರ್ಟ್ ಯಾವುದೇ ಪ್ರಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


