ದೇಶ

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!

ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 2ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!
ಪಿ ಚಿದಂಬರಂ
Published On :

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 2ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.

ಆ.21 ರಂದು ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಚಿದಂಬರಂ ಗೆ ಆ.30ರ ವರೆಗೆ ಸಿಬಿಐ ಕಸ್ಟಡಿ ವಿಧಿಸಲಾಗಿತ್ತು. ಈಗ ಅವಧಿ ಮುಕ್ತಾಯಗೊಂಡಿದ್ದು ಮತ್ತೆ ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. ಸದ್ಯ ದೆಹಲಿ ಕೋರ್ಟ್ ಸೆ.2ರವರೆಗೆ ಸಿಬಿಐ ಕಸ್ಟಡಿ ಅವಧಿ ವಿಸ್ತರಿಸಿದೆ

ವಿಚಾರಣೆಗೂ ಮುನ್ನ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದ ಚಿದಂಬರಂ ಪರ ವಕೀಲರು ಸೆ.2ರವರೆಗೆ ಸಿಬಿಐ ವಶದಲ್ಲೇ ಇರಲು ಚಿದಂಬರಂಗೆ ಅನುಮತಿ ನೀಡಬೇಕೆಂದು ಕೋರಿದ್ದರು. 

ಆರ್. ಭಾನುಮತಿ ಹಾಗೂ ಎಎಸ್ ಬೋಪಣ್ಣ ಅವರಿದ್ದ ವಿಭಾಗೀಯ ಪೀಠದೆದುರು ಚಿದಂಬರಂ ಈ ಅರ್ಜಿ ಸಲ್ಲಿಸಿದ್ದರು. ವಿಚಾರಣಾಧೀನ ನ್ಯಾಯಾಲಯ ತಮ್ಮನ್ನು ಸಿಬಿಐ ವಶಕ್ಕೆ ನೀಡಿರುವುದು ಹಾಗೂ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿರುವುದನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸೆ.2 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.