ಸಿಖ್ ಬಾಲಕಿಯ ಬಲವಂತದ ಮತಾಂತರ, ಮದುವೆ; ಸೂಕ್ತ ಕ್ರಮ ಕೈಗೊಳ್ಳಲು ಭಾರತ ಪಾಕಿಸ್ತಾನಕ್ಕೆ ಒತ್ತಡ
ಸಿಖ್ ಜನಾಂಗದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿದ ಘಟನೆಗೆ ಸಂಬಂಧಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಭಾರತ ಪಾಕಿಸ್ತಾನವನ್ನು ಒತ್ತಾಯಿಸಿದೆ.

ನವದೆಹಲಿ: ಸಿಖ್ ಜನಾಂಗದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿದ ಘಟನೆಗೆ ಸಂಬಂಧಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಭಾರತ ಪಾಕಿಸ್ತಾನವನ್ನು ಒತ್ತಾಯಿಸಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮತಾಂತರಗೊಳಿಸಿ ನಂತರ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಿಸಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಂಕನ ನಗರದಲ್ಲಿ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್, ಸಿಖ್ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ಭಾರತದ ಹಲವು ಭಾಗಗಳಿಂದ ಸಚಿವಾಲಯಕ್ಕೆ ಈ ಕುರಿತು ದೂರುಗಳು ಬಂದಿವೆ ಎಂದರು.
ಈ ಬಗ್ಗೆ ಪಾಕಿಸ್ತಾನ ಸರ್ಕಾರ ಜೊತೆ ನಾವು ಮಾತುಕತೆ ನಡೆಸಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


