ಹತ್ಯಾಚಾರ: 'ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು': ವಿವಾದಕ್ಕೀಡಾದ ಜಯಾ ಬಚ್ಚನ್ ಹೇಳಿಕೆ!
ಹೈದರಾಬಾದ್ ವಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.

ನವದೆಹಲಿ: ಹೈದರಾಬಾದ್ ವಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ.
ಮಹಿಳೆಯರ ಮೇಲಿನ ಅಪರಾಧ ಘಟನೆಗಳು ಹೆಚ್ಚಾಗುತ್ತಿರುವ ವಿಚಾರದ ಬಗ್ಗೆ ನಡೆದ ಚರ್ಚೆಯೊಂದರಲ್ಲಿ ಮಾತನಾಡುತ್ತಿದ್ದ ಜಯಾ ಬಚ್ಚನ್, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ತಂದು ನಿಲ್ಲಿಸಿ ಥಳಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅವರ ಈ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ಒಬ್ಬ ಜವಾಬ್ದಾರಿಯುತ ಸಂಸದೆಯಾಗಿ ಜಯಾ ಬಚ್ಚನ್ ಅವರು ಹಿಂಸಾತ್ಮಕ ಮಾರ್ಗಕ್ಕೆ ಕರೆ ಕೊಟ್ಟಿರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ನಲ್ಲಿ ಕಳೆದ ವಾರ 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ಕು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆಗೈದಿದ್ದರು. ಮಹಿಳೆಯ ಟಯರ್ ಪಂಕ್ಚರ್ ಆದಾಗ ಸಹಾಯ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಈ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Related Article
ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಹೈದರಾಬಾದ್ 'ಹತ್ಯಾಚಾರ' ಪ್ರಕರಣ: ಕಠಿಣ ಕಾನೂನಿಗೆ ಸಿದ್ಧ ಎಂದ ಸರ್ಕಾರ
'ಹತ್ಯಾಚಾರ': ಆಕೆಯನ್ನು ಹೇಗೆ ಕೊಂದರೋ ಅದೇ ರೀತಿ ನನ್ನ ಮಗನನ್ನೂ ಕೊಂದು ಹಾಕಿ: ಆರೋಪಿಯ ತಾಯಿ
'ಹತ್ಯಾಚಾರ'; ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಬೇಕು: ಪ್ರಧಾನಿಗೆ ಕೆಟಿಆರ್ ಮನವಿ
ಪಶು ವೈದ್ಯೆ 'ಹತ್ಯಾಚಾರ'; ವ್ಯಾಪಕ ಟೀಕೆಗಳ ಬಳಿಕ ಕೊನೆಗೂ ಮೌನಮುರಿದ ತೆಲಂಗಾಣ ಸಿಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


