ಹಣಕಾಸಿನ ಬಿಕ್ಕಟ್ಟು: ಅಪಾರ್ಟ್ ಮೆಂಟ್ ನ 8 ನೇ ಮಹಡಿಯಿಂದ ಜಿಗಿದು ದಂಪತಿ ಆತ್ಮಹತ್ಯೆ
ಹಣಕಾಸಿನ ಬಿಕ್ಕಟ್ಟಿನ ಕಾರಣದಿಂದ ದಂಪತಿಯೊಂದು ಅಪಾರ್ಟ್ ಮೆಂಟ್ ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾಪುರಂನಲ್ಲಿ ಇಂದು ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಜಿಯಾಬಾದ್ : ಹಣಕಾಸಿನ ಬಿಕ್ಕಟ್ಟಿನ ಕಾರಣದಿಂದ ದಂಪತಿಯೊಂದು ಅಪಾರ್ಟ್ ಮೆಂಟ್ ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾಪುರಂನಲ್ಲಿ ಇಂದು ಬೆಳಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಡಿಯಿಂದ ಜಿಗಿಯುವ ಮುನ್ನ ತನ್ನಿಬ್ಬರು ಮಕ್ಕಳನ್ನು ಈ ದಂಪತಿ ಹತ್ಯೆ ಮಾಡಿದ್ದಾರೆ. ಇವರೊಟ್ಟಿಗೆ ಜಿಗಿದ ಮಹಿಳೆಯೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಂಪತಿ ವಾಸಿಸುತ್ತಿದ್ದ ಫ್ಲಾಟ್ ಭಾಗಿಲು ತೆರೆದಾಗ ಇಬ್ಬರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿತು. ಆತ್ಮಹತ್ಯೆ ನೋಟ್ ಕೂಡಾ ಸಿಕ್ಕಿದೆ. ಹಣಕಾಸಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ತಿಳಿಸಿದ್ದಾರೆ.
ಈ ದಂಪತಿಗೆ ಒಂದು ಗಂಡು ಹಾಗೂ ಹೆಣ್ಣು ಮಗುವಿತ್ತು. ಬೆಳಗ್ಗೆ 5 ರಿಂದ 5-15ರ ಸುಮಾರಿನಲ್ಲಿ ಈ ದುರ್ಘಟನೆ ನಡೆದಿದೆ. ಏನೂ ಶಬ್ದ ಬಂದಿತ್ತು. ಬಂದು ನೋಡುವಷ್ಟರಲ್ಲಿ ಮೂವರು ರಕ್ತದ ಮಡುವಿನಲ್ಲಿ ಬಿದಿದ್ದರು. ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾಗಿ ಅಪಾರ್ಟ್ ಮೆಂಟ್ ನ ಭದ್ರತಾ ಸಿಬ್ಬಂದಿ ಅಜಾಜ್ ಕರೀಂ ಖಾನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


