ಮಧ್ಯ ಪ್ರದೇಶ: ಫುಟ್ ಪಾತ್ ನಲ್ಲಿ ಪೋಷಕರೊಂದಿಗೆ ಮಲಗಿದ್ದ 4 ವರ್ಷದ ಮಗು ಅಪಹರಿಸಿ 'ಹತ್ಯಾಚಾರ'
ಹೈದರಾಬಾದ್ ನ ಪಶುವೈದ್ಯೆಯ ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಧ್ಯ ಪ್ರದೇಶದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ವರದಿಯಾಗಿದೆ.

ಭೋಪಾಲ್: ಹೈದರಾಬಾದ್ ನ ಪಶುವೈದ್ಯೆಯ ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಧ್ಯ ಪ್ರದೇಶದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ವರದಿಯಾಗಿದೆ.
ಪೋಷಕರೊಂದಿಗೆ ಫುಟ್ ಪಾತ್ ಮೇಲೆ ಮಲಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿರುವ ಅಮಾನವೀಯ ಘಟನೆ ಇಂದೋರ್ ಜಿಲ್ಲೆಯ ಮೌಟೌನ್ ನಲ್ಲಿ ನಡೆದಿದೆ.
ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಓವರ್ ಬ್ರಿಡ್ಜ್ ಕೆಳಗಡೆ ಫುಟ್ ಪಾತ್ ಮೇಲೆ ಮಲಗಿದ್ದ ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಬಳಿಕ ಪೋಷಕರು ಮಗು ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರಿಗೆ ಇಂದು ಆಸ್ಪತ್ರೆಯೊಂದರ ಬಳಿ ಮಗು ಮೃತದೇಹ ಪತ್ತೆಯಾಗಿದೆ.
ಶವ ಪರೀಕ್ಷೆ ನಡೆಸಿದ ವೈದ್ಯರು, ಹತ್ಯೆ ಮಾಡುವ ಮುನ್ನ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


