ದೇಶ

ಅಯ್ಯಪ್ಪ ಭಕ್ತರ ಗಮನಕ್ಕೆ; ಶಬರಿಮಲೆಯಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ!

ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಅಯ್ಯಪ್ಪ ಭಕ್ತರ ಗಮನಕ್ಕೆ; ಶಬರಿಮಲೆಯಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ!
ಸಂಗ್ರಹ ಚಿತ್ರ
Published On :

ಕೊಚ್ಚಿನ್: ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವ ಅಯ್ಯಪ್ಪ ಸ್ವಾಮಿ ದೇಗುಲ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ತಡೆಯಲು ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಹೇಳಿದೆ.

ಇದಕ್ಕಾಗಿ ಈ ಹಿಂದೆಯೇ ಓಂಬುಡ್ಸ್ ಮನ್ ಕೂಡ ಜಾರಿಗೆ ತರಲಾಗಿತ್ತು. ನ್ಯಾಯಮೂರ್ತಿ ಪಿಆರ್ ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತ ಮಾಹಿತಿ ನೀಡಿದ್ದು, ದೇವಾಲಯದ ಆವರಣದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ, ಫೋಟೋ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.