ಅಧಿಕಾರಕ್ಕೇರಲು ಜನರಲ್ಲಿ ಭೀತಿ ಮೂಡಿಸುತ್ತಿವೆ; ಕಾಂಗ್ರೆಸ್, ಜೆಎಂಎಂ ವಿರುದ್ಧ ಮೋದಿ ಕಿಡಿ
"ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದೆ"

ಜಾರ್ಖಂಡ್: ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ಕಾಂಗ್ರೆಸ್ ಹಾಗೂ ಖಾರ್ಖಂಡ್ ಮುಕ್ತಿ ಮೋರ್ಚಾದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶವನ್ನು ಲೂಟಿ ಮಾಡುವುದೊಂದೇ ಅವರ ಉದ್ದೇಶವಾಗಿದ್ದು, ಅದಕ್ಕಾಗಿ ರಾಜ್ಯದಲ್ಲಿ ಅಧಿಕಾರಕ್ಕೇರಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇಲ್ಲಿನ ಬಿರ್ಸಾ ಕಾಲೇಜು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಹಾಗೂ ಜೆಎಂಎಂ ನ ಇತಿಹಾಸ ಹಾಗೂ ಕೃತ್ಯಗಳನ್ನು ಅರಿತಿರುವ ಜನರು ಆ ಪಕ್ಷಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಎರಡೂ ಪಕ್ಷಗಳು ರಾಜ್ಯದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿವೆ. ಅವರಿಗೆ ಕೈಗಾರಿಕೋದ್ಯಮ ಮತ್ತು ಅಭಿವೃದ್ಧಿ ಬೇಕಿಲ್ಲ. ಏಕೆಂದರೆ ಜನರ ಕೈಯಲ್ಲಿ ಹಣ ಓಡಾಡಲಾರಂಭಿಸಿದರೆ ಅವರನ್ನು ಪರಿಗಣಿಸುವುದಿಲ್ಲ ಎಂಬ ಸತ್ಯ ವಿಪಕ್ಷಗಳಿಗೆ ತಿಳಿದಿದೆ ಎಂದು ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


