ದೇಶ

ಪೂರ್ವಯೋಜಿತವಲ್ಲ, ಪೊಲೀಸರ ಆತ್ಮರಕ್ಷಣೆಗಾಗಿ ಎನ್ಕೌಂಟರ್: ಡಿಸಿಪಿ ಪ್ರಕಾಶ್ ರೆಡ್ಡಿ!

ಹೈದರಾಬಾದ್ ಪಶುವೈದ್ಯೆ ಹತ್ಯಾಚಾರ ಪ್ರಕರಣದ ಆರೋಪಿಗಳ ಮೇಲಿನ ಎನ್ಕೌಂಟರ್ ಪೂರ್ವಯೋಜಿತವಲ್ಲ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಹೇಳಿದ್ದಾರೆ.

ಪೂರ್ವಯೋಜಿತವಲ್ಲ, ಪೊಲೀಸರ ಆತ್ಮರಕ್ಷಣೆಗಾಗಿ ಎನ್ಕೌಂಟರ್: ಡಿಸಿಪಿ ಪ್ರಕಾಶ್ ರೆಡ್ಡಿ!
ಎನ್ಕೌಂಟರ್ ನಡೆದ ಸ್ಥಳ
Published On :

ಹೈದರಾಬಾದ್: ಹೈದರಾಬಾದ್ ಪಶುವೈದ್ಯೆ ಹತ್ಯಾಚಾರ ಪ್ರಕರಣದ ಆರೋಪಿಗಳ ಮೇಲಿನ ಎನ್ಕೌಂಟರ್ ಪೂರ್ವಯೋಜಿತವಲ್ಲ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಹೇಳಿದ್ದಾರೆ.

ಪ್ರಿಯಾಂಕಾರೆಡ್ಡಿ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಕಾಶ್ ರೆಡ್ಡಿ ಅವರು, ಎನ್ಕೌಂಟರ್ ಪೂರ್ವಯೊಜಿತವೆಂಬ ಆರೋಪದಲ್ಲಿ ಹುರುಳಿಲ್ಲ. ಆರೋಪಿಗಳನ್ನು ಅಪರಾಧ ನಡೆದ ಸ್ಥಳಕ್ಕೆ ಬೆಳಗ್ಗೆ 3 ಗಂಟೆಗೆ ಕರೆದುಕೊಂಡು ಬಂದು ಕ್ರೈಮ್ ಸೀನ್ ರೀ ಕನ್ಸ್ ಸ್ಟ್ರಕ್ಷನ್ ಗಾಗಿ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಅವರು ಪೊಲೀಸರ ಶಸ್ತ್ರಾಸ್ತ್ರ ಕಸಿಯಲು ಯತ್ನಿಸಿದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಿಲು ಯತ್ನಿಸಿದರು. ಹೀಗಾಗಿ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

ಅಂತೆಯೇ ಘಟನೆಯಲ್ಲಿ ಪ್ರಿಯಾಂಕಾ ರೆಡ್ಡಿ ಪ್ರಕರಣದ ಆರೋಪಿಗಳಾದ ಮಹಮದ್ ಆರಿಫ್, ಜೊಲ್ಲು ನವೀನ್, ಜೊಲ್ಲು ಶಿವ ಮತ್ತು ಚನ್ನಕೇಶವುಲು ಸಾವನ್ನಪ್ಪಿದ್ದಾರೆ. ನಾನು ಕೂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ ಎಂದು ಪ್ರಕಾಶ್ ರೆಡ್ಡಿ ಹೇಳಿದ್ದಾರೆ.

Related Article

ಅತ್ಯಾಚಾರಿಗಳಿಗೆ ಸಿಕ್ಕ ಶಿಕ್ಷೆಗೆ ಬಹಳ ಸಂತೋಷವಾಯಿತು, ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲುಶಿಕ್ಷೆ ನೀಡಿ: ನಿರ್ಭಯಾ ತಾಯಿ

ಹೈದರಾಬಾದ್: ನರರಾಕ್ಷಸರನ್ನು ಬೇಟೆಯಾಡಿದ್ದು ಕರ್ನಾಟಕದ ಸಿಂಗಂ!

ಪಾಪಿಗಳಿಗೆ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ: ಎನ್ಕೌಂಟರ್ ಕುರಿತು ಪ್ರಿಯಾಂಕಾ ಪೋಷಕರು

ಪ್ರಿಯಾಂಕಾ ರೆಡ್ಡಿ 'ಹತ್ಯಾಚಾರ': ಎಲ್ಲಾ ಆರೋಪಿಗಳು ಎನ್'ಕೌಂಟರ್ ನಲ್ಲಿ ಹತ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.