ದೇಶ

ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ: ರಾಷ್ಟ್ರಪತಿಗೆ ಕೇಂದ್ರ ಶಿಫಾರಸು

ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.

ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ: ರಾಷ್ಟ್ರಪತಿಗೆ ಕೇಂದ್ರ ಶಿಫಾರಸು
ರಾಮನಾಥ ಕೋವಿಂದ್
Published On :

ನವದೆಹಲಿ: ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ  ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.

ನಿರ್ಭಯಾ ಹತ್ಯಾಚಾರ ಪ್ರಕರಣದ ಪ್ರಮುಖ ಅಪರಾಧಿ ವಿನಯ್ ಶರ್ಮಾಗೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದು, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದು, ಅದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.

2012ರ ಡಿಸೆಂಬರ್ 16ರಂದು ರಾತ್ರಿ ವೇಳೆ ತನ್ನ ಸ್ನೇಹಿತನೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಒಟ್ಟು ಆರು ಮಂದಿ ಅತ್ಯಂತ ಕ್ರೂರ ಹಾಗೂ ಅಮಾನುಷವಾಗಿ ಅತ್ಯಾಚಾರವೆಸಗಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಈ ಆರು ಮಂದಿ ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್​ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇನ್ನುಳಿದ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲದೇ ಈ ಆದೇಶವನ್ನು ದೆಹಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.