ದೇಶ

ಜಾರ್ಖಂಡ್ ವಿಧಾನಸಭೆ 2ನೇ ಹಂತದ ಮತದಾನ: ಓರ್ವನಿಗೆ ಗಾಯ, ಬೆಳಗ್ಗೆ 9ರವರೆಗೆ ಶೇ.12.35 ಮತದಾನ

ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಪ್ರಗತಿಯಲ್ಲಿದ್ದು ಗುಮ್ಲಾದ ಸಿಸೈ ಕ್ಷೇತ್ರದಲ್ಲಿ ಭದ್ರತಾ ಪಡೆಯಿಂದ ಶಸ್ತಾಸ್ತ್ರಗಳನ್ನು ಕಸಿಯಲು ಯತ್ನಿಸುತ್ತಿದ್ದ ವೇಳೆ ಗುಂಡು ಹಾರಿಸಿದ್ದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಜಾರ್ಖಂಡ್ ವಿಧಾನಸಭೆ 2ನೇ ಹಂತದ ಮತದಾನ: ಓರ್ವನಿಗೆ ಗಾಯ, ಬೆಳಗ್ಗೆ 9ರವರೆಗೆ ಶೇ.12.35 ಮತದಾನ
ಮತದಾನ
Published On :

ರಾಂಚಿ: ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಮತದಾನ ಶನಿವಾರ ಪ್ರಗತಿಯಲ್ಲಿದ್ದು ಗುಮ್ಲಾದ ಸಿಸೈ ಕ್ಷೇತ್ರದಲ್ಲಿ ಭದ್ರತಾ ಪಡೆಯಿಂದ ಶಸ್ತಾಸ್ತ್ರಗಳನ್ನು ಕಸಿಯಲು ಯತ್ನಿಸುತ್ತಿದ್ದ ವೇಳೆ ಗುಂಡು ಹಾರಿಸಿದ್ದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.


ಸಿಸೈ ಕ್ಷೇತ್ರದ ಬೂತ್ ಸಂಖ್ಯೆ 36ರಲ್ಲಿ ಭದ್ರತಾ ಪಡೆಯಿಂದ ಬಂದೂಕು ಕಸಿಯಲು ಯತ್ನಿಸಿದ ವ್ಯಕ್ತಿಗಳ ಮೇಲೆ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಗುಂಡು ಹಾರಿಸಿದ್ದರಿಂದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುರಾರಿ ಲಾಲ್ ಮೀನಾ ತಿಳಿಸಿದ್ದಾರೆ.


ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ. 
ಇಂದು ನಡೆಯುತ್ತಿರುವ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇಕಡಾ 12.35ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.