ಉನ್ನಾವೋ ಪ್ರಕರಣದ ಅತ್ಯಾಚಾರಿಗಳನ್ನು ತಿಂಗಳೊಳಗೆ ಗಲ್ಲಿಗೇರಿಸಿ: ಸ್ವಾತಿ ಮಾಲಿವಾಲ್
ಉನ್ನಾವೋ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳಲ್ಲೆ ಮುಗಿಸಿ, ನಂತರ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರು ಆಗ್ರಹಪಡಿಸಿದ್ದಾರೆ.

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳಲ್ಲೆ ಮುಗಿಸಿ, ನಂತರ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರು ಆಗ್ರಹಪಡಿಸಿದ್ದಾರೆ.
ತ್ವರಿತ ಶಿಕ್ಷೆಗೆಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು ಯುಪಿ ಮತ್ತು ಕೇಂದ್ರ ಸರ್ಕಾರ ಈ ಬಗ್ಗೆ ಕೂಡಲೇ ಕ್ರಮಕೈಗೊಂಡು, ಈ ಪ್ರಕರಣದಲ್ಲಿ ಭಾಗಿಯಾದ ಅತ್ಯಾಚಾರಿಗಳನ್ನು ಒಂದು ತಿಂಗಳೊಳಗೆ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.
ರಾಜಕೀಯ ನಾಯಕರ ನೀಡಿರುವ ಭದ್ರತೆ ರದ್ದುಪಡಿಸಬೆಕು ಎಂದು ಗೃಹ ಕಾರ್ಯದರ್ಶಿಗೆ ಮನವಿ ಮಾಡಲಿದ್ದೇನೆ ಮಹಿಳೆ ಅನುಭವಿಸುವ ಭಯ ಮತ್ತು ಅಭದ್ರತೆಯನ್ನು ಅವರು ಅರಿಯಬೇಕು ಎಂದು ಆಗ್ರಹಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


