ಉನ್ನಾವೋ ಅತ್ಯಾಚಾರಿಗಳಿಗೂ ಹೈದರಾಬಾದ್ ಘಟನೆಯ ಮಾದರಿಯಲ್ಲಿ ಶಾಸ್ತಿಯಾಗಲಿ: ಸಂತ್ರಸ್ತೆಯ ಕುಟುಂಬ
ಉನ್ನಾವೋ ಅತ್ಯಾಚಾರದ ಸಂತ್ರಸ್ತೆ ಸಾವನ್ನಪ್ಪಿದ್ದು, ಅತ್ಯಾಚಾರಿಗಳ ವಿರುದ್ಧ ದೇಶಾದ್ಯಂತ ಆಕ್ರೋಶದ ಪ್ರತಿಭಟನೆಗಳಾಗುತ್ತಿವೆ.

ನವದೆಹಲಿ: ಉನ್ನಾವೋ ಅತ್ಯಾಚಾರದ ಸಂತ್ರಸ್ತೆ ಸಾವನ್ನಪ್ಪಿದ್ದು, ಅತ್ಯಾಚಾರಿಗಳ ವಿರುದ್ಧ ದೇಶಾದ್ಯಂತ ಆಕ್ರೋಶದ ಪ್ರತಿಭಟನೆಗಳಾಗುತ್ತಿವೆ.
ಸಂತ್ರಸ್ತೆಯ ಕುಟುಂಬ ಸದಸ್ಯರು ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾರವೆಸಗಿ ಆಕೆಯನ್ನು ಹತ್ಯೆ ಮಾಡಿದ ಆರೋಪಿಗಳನ್ನು ಎನ್ ಕೌಂಟರ್ ಮಾಡಿದಂತೆಯೇ ಉನ್ನಾವೋ ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿಗಳಿಗೂ ತಕ್ಕ ಶಾಸ್ತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಎಲ್ಲದರ ನಡುವೆ ಉತ್ತರ ಪ್ರದೇಶದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ರಕ್ಷಣೆ ಒದಗಿಸಲು ವಿಫಲವಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಈ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಸಂತ್ರಸ್ತೆಯ ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದು, ಪ್ರಕರಣವನ್ನು ಇತ್ಯರ್ಥಗೊಳಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ ಮಾಡುವುದಾಗಿ, ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


