ದೆಹಲಿ ಅಗ್ನಿ ಅವಘಡ 'ಅತ್ಯಂತ ಭಯಾನಕ' ಎಂದ ಪ್ರಧಾನಿ, ಗೃಹ ಸಚಿವ: ನೆರವಿಗೆ ಸೂಚನೆ
ರಾಜಧಾನಿ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ರಾಜಧಾನಿ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕಾರ್ಮಿಕರಿಗೆ ನನ್ನ ತೀವ್ರ ಸಂತಾಪಗಳು, ಅವರ ಕುಟುಂಬದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದ್ದಾರೆ.
ದುರಂತ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಅಗತ್ಯ ನೆರವು ನೀಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.
ದೆಹಲಿಯ ಅಗ್ನಿ ದುರಂತದಲ್ಲಿ ಹಲವು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಳಿ ತೀವ್ರ ದುಃಖವಾಗುತ್ತಿದೆ. ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳು.ಗಾಯಗೊಂಡವರು ಶೀಘ್ರವಾಗಿ ಗುಣಮುಖವಾಗಲಿ. ತುರ್ತು ಆದ್ಯತೆ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


