ದೇಶ, ಈಶಾನ್ಯ ರಾಜ್ಯಗಳ ಹಿತಾಸಕ್ತಿಗಾಗಿ ಪೌರತ್ವ ಮಸೂದೆ ಮಂಡನೆ: ಪ್ರಹ್ಲಾದ್ ಜೋಷಿ
ರಾಷ್ಟ್ರ ಹಾಗೂ ಈಶಾನ್ಯ ರಾಜ್ಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪೌರತ್ವ ಮಸೂದೆಯನ್ನು ಮಂಡನೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ಹಾಗೂ ಈಶಾನ್ಯ ರಾಜ್ಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪೌರತ್ವ ಮಸೂದೆಯನ್ನು ಮಂಡನೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರು ಸೋಮವಾರ ಹೇಳಿದ್ದಾರೆ.
ನೆರೆ ದೇಶಗಳಲ್ಲಿನ ಧಾರ್ಮಿಕ ಕಿರುಕುಳಗಳಿಗೆ ಹೆದರಿ, ಅಲ್ಲಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತಕರರಿಗೆ ಭಾರತೀಯ ಪೌರತ್ವ ನೀಡುವ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದೆ. 60 ವರ್ಷದಷ್ಟು ಹಳೆಯದಾದ ಈ ಮಸೂದೆಯ ತಿದ್ದುಪಡಿಗೆ ಇಂದು ಮಧ್ಯಾಹ್ನ ಗೃಹ ಸಚಿವ ಅಮಿತ್ ಶಾ ಅವರು ಮಸೂದೆ ಮಂಡಿಸಲಿದ್ದಾರೆ. ನಂತರ ಈ ಮಸೂದೆ ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಹ್ಲಾದ್ ಜೋಷಿಯವರು, ಮಸೂದೆಯು ದೇಶ ಹಾಗೂ ಈಶಾನ್ಯ ರಾಜ್ಯಗಳ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದೆ. ಮಸೂದೆ ಎರಡೂ ಸದನದಗಳಿಂದ ಒಪ್ಪಿಗೆ ಪಡೆದುಕೊಳ್ಳಲಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಸೂದೆಯನ್ನು ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


