ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...
ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಅಮರಾವತಿ: ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಪಶುವೈದ್ಯೆಯ ಅತ್ಯಾಚಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಮಾತನಾಡಿರುವ ಜಗನ್ ರೆಡ್ಡಿ, ಹೈದರಾಬಾದ್ ಪೊಲೀಸರ ನಡೆಯನ್ನು ಹೊಗಳಿದ್ದಾರೆ.
ಆಂಧ್ರಪ್ರದೇಶದ ವಿಧಾನಸಭೆಯಲ್ಲಿ ಮಾತನಾಡಿರುವ ಜಗನ್ ರೆಡ್ದಿ, ತೆಲಂಗಾಣ ಸಿಎಂ ಕೆಸಿಆರ್ ಹಾಗೂ ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಹ್ಯಾಟ್ಸ್ ಆಫ್ ಎಂದು ಹೇಳಿದ್ದಾರೆ.
ಟಿವಿ ಹಾಗೂ ನ್ಯೂಸ್ ಪೇಪರ್ ಗಳಲ್ಲಿ ಇಡಿಯ ಪ್ರಕರಣವನ್ನು ನೋಡಿದ್ದೆ. ದಿಶಾ ಪೋಷಕರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಾನೂ ಸಹ ಇಬ್ಬರು ಹೆಣ್ಣುಮಕ್ಕಳ ತಂದೆ, ಓರ್ವ ಸಹೋದರಿ ಇದ್ದಾಳೆ. ಓರ್ವ ತಂದೆಯಾಗಿ ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಗೆ ನಿಯಮಗಳ ಬಗ್ಗೆ ಮಾತನಾಡಲಿ ಎಂದು ಜಗನ್ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


