ಅತ್ಯಾಚಾರ,ಪ್ರಕರಣ ವಿಚಾರಣೆಗಾಗಿ 218 ತ್ವರಿತ ನ್ಯಾಯಾಲಯ ಸ್ಥಾಪನೆಗೆ ಉತ್ತರ ಪ್ರದೇಶ ಸಂಪುಟ ತೀರ್ಮಾನ
ಮಕ್ಕಳ ಮೇಲಿನ ಅಪರಾಧ ಹಾಗೂ ತ್ಯಾಚಾರಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ 218 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಉತ್ತರ ಪ್ರದೇಶ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ.

ಲಖನೌ: ಮಕ್ಕಳ ಮೇಲಿನ ಅಪರಾಧ ಹಾಗೂ ತ್ಯಾಚಾರಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ 218 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಉತ್ತರ ಪ್ರದೇಶ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯ ಕಾನೂನು ಸಚಿವ ಬ್ರಜೇಶ್ ಪಾಠಕ್ ಸುದ್ದಿಗಾರರಿಗೆ ತಿಳಿಸಿದರು.
ಮಕ್ಕಳ ಮೇಲಿನ ಅಪರಾಧ, ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ 218 ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಉತ್ತರ ಪ್ರದೇಶ ಸಚಿವ ಸಂಪುಟ ನಿರ್ಧರಿಸಿದೆ. ಈ ಪೈಕಿ 144 ನ್ಯಾಯಾಲಯಗಳು ಅತ್ಯಾಚಾರ ಪ್ರಕರಣಗಳನ್ನು ಆಲಿಸಲಿದ್ದು, 74 ನ್ಯಾಯಾಲಯಗಳು ಪೋಕ್ಸೊ ಪ್ರಕರಣಗಳನ್ನು ಆಲಿಸಲಿವೆ. ಎಂದು ಸಚಿವರು ವಿವರಿಸಿದ್ದಾರೆ.
ಈ ತ್ವರಿತ ನ್ಯಾಯಾಲಯಗಳಿಗಾಗಿ, ಹೆಚ್ಚುವರಿ ಸ್ಥಳಹಾಗೂ 218 ಹೆಚ್ಚುವರಿ ನ್ಯಾಯಾಧೀಶರ ಹುದ್ದೆಮತ್ತು ನ್ಯಾಯಾಲಯಕ್ಕೆ ಸಿಬ್ಬಂದಿ ಹುದ್ದೆಗಳನ್ನು ಸಹ ರಚಿಸಲಾಗುತ್ತದೆ."ನ್ಯಾಯಾಲಯಗಳನ್ನು ನಡೆಸುವಲ್ಲಿನ ವೆಚ್ಚವನ್ನು, ಶೇಕಡಾ 60 ರಷ್ಟು ಕೇಂದ್ರವು ಭರಿಸಲಿದೆ, ಆದರೆ ರಾಜ್ಯ ಸರ್ಕಾರವು ಶೇಕಡಾ 40 ರಷ್ಟು ಖರ್ಚು ಮಾಡುತ್ತದೆ. ಪ್ರತಿ ಹೊಸ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳಿಗೆ ಅಂದಾಜು 63 ಲಕ್ಷ ರೂ ವೆಚ್ಚ ತಗುಲಲಿದೆ ಎಂದು ಪಾಠಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


